Tuesday, December 9, 2025

ಫೋಟೋಶೂಟ್‌ಗೆ ಹೋಗಿದ್ದ ಭಾವಿ ದಂಪತಿ ಅಪಘಾತದಲ್ಲಿ ಮೃತ.

 ಫೋಟೋಶೂಟ್‌ಗೆ ಹೋಗಿದ್ದ ಭಾವಿ ದಂಪತಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಬೆಣಕಲ್ ಗ್ರಾಮದ ಬಳಿ ನಡೆದಿದೆ.

ಕೊಪ್ಪಳ ತಾಲೂಕಿನ ಹನುಮನಹಟ್ಟಿ ಗ್ರಾಮದ ಕರಿಯಪ್ಪ ಮಡಿವಾಳ ಹಾಗೂ ಕಾರಟಗಿ ತಾಲೂಕಿನ ಮುಳ್ಳೂರು ಗ್ರಾಮದ ಕವಿತಾ ಮೃತರು. ಈ ಜೋಡಿಯ ಮದುವೆಯನ್ನು ಇದೇ ತಿಂಗಳ 20ರಂದು ನಿಶ್ಚಯಿಸಲಾಗಿತ್ತು. ಮದುವೆ ಹಿನ್ನೆಲೆ ಇಬ್ಬರು ಪ್ರೀ-ವೆಡ್ಡಿಂಗ್ ಶೂಟ್ಗಾಗಿ ತೆರಳಿದ್ದರು.

ಮುನಿರಾಬಾದ್‌ನ ಪಂಪಾವನ, ಕೂಕನಪಳ್ಳಿಯ ಬೂದೇಶ್ವರ ದೇವಸ್ಥಾನ ಬಳಿ ಪ್ರೀ-ವೆಡ್ಡಿಂಗ್ ಫೋಟೋಶೂಟ್ ಮಾಡಿಸಿಕೊಂಡಿದ್ದರು. ಬಳಿಕ ಮೃತ ಕರಿಯಪ್ಪ, ಕವಿತಾಳನ್ನು ಬೈಕ್ ಮೇಲೆ ಮುಷ್ಟೂರಿಗೆ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಚಿಕ್ಕಬೆಣಕಲ್ ಗ್ರಾಮದ ಬಳಿ ಲಾರಿಯನ್ನು ಓವರ್ ಟೆಕ್ ಮಾಡುವಾಗ ಎದುರಿಗೆ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕರಿಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲು ಮಾಡಿ, ತನಿಖೆ ಆರಂಭಿಸಿದ್ದಾರೆ.


0 Comments:

Post a Comment

Subscribe to Post Comments [Atom]

<< Home