ಒಳ ಮೀಸಲಾತಿಯು ಕಾನೂನುಬದ್ಧ ಎಂದ ಸುಪ್ರೀಂ ಕೋರ್ಟ್.
ಒಳ ಮೀಸಲಾತಿಯು ಕಾನೂನುಬದ್ಧ ಎಂದ ಸುಪ್ರೀಂ ಕೋರ್ಟ್.
ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್‌ನ ಏಳು ಸದಸ್ಯರ ಸಾಂವಿಧಾನಿಕ ಪೀಠ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಗೆಲುವಾಗಿದೆ. ಎಸ್‌ಸಿ/ಎಸ್‌ಟಿ ಸಮುದಾಯಗಳಲ್ಲಿ ಒಳಮೀಸಲಾತಿ ಸಮರ್ಥನೀಯ ಎಂದು ತೀರ್ಪು ಪ್ರಕಟಿಸಿದ ಮಾನ್ಯ ಸರ್ವೋಚ್ಚ ನ್ಯಾಯಾಲಯದ ಈ ಮಹತ್ವದ ಆದೇಶದಿಂದಾಗಿ ದಶಕಗಳಿಂದ ನಡೆಯುತ್ತಿದ್ದ ನಿರಂತರ ಹೋರಾಟಕ್ಕೆ ಅಭೂತಪೂರ್ವ ಜಯ ದೊರಕಿದಂತಾಗಿದೆ.
ಈ ಹಿಂದೆ ಕರ್ನಾಟಕದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಒಳ ಮೀಸಲಾತಿಯ ವಿಷಯದಲ್ಲಿ ದಿಟ್ಟ ನಿರ್ಧಾರ ತೆಗೆದುಕೊಂಡಿತ್ತು. ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ ಎಸ್ಟಿ ಮೀಸಲಾತಿಯನ್ನು ಹೆಚ್ಚಿಸಿತು. ಹಾಗೆಯೇ ಜನಸಂಖ್ಯೆಗೆ ಅನುಗುಣವಾಗಿ ಎಸ್ಸಿ ಮೀಸಲಾತಿಯನ್ನು ವರ್ಗೀಕರಣ ಮಾಡುವ ಶಿಫಾರಸ್ಸನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿತ್ತು. ಆನಂತರದ ಬೆಳವಣಿಗೆಯಲ್ಲಿ ನರೇಂದ್ರ ಮೋದಿ ಸರಕಾರ ಒಳ ಮೀಸಲಾತಿಯ ಪರವಾಗಿ ಸುಪ್ರೀಂಕೋರ್ಟ್ ನಲ್ಲಿ ವಕಾಲತ್ತು ನೆಡಸಿತು. ಇದೀಗ ಐತಿಹಾಸಿಕ ತೀರ್ಪು ಬಂದಿದೆ.
ಮಾನ್ಯ ಸರ್ವೋಚ್ಚ ನ್ಯಾಯಾಲಯದ ಈ ತೀರ್ಪು ಅವಕಾಶವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು, ಅಸಮಾನತೆ ತೊಡಗಿಸಲು ದಿಕ್ಸೂಚಿಯಾಗಲಿದೆ.
.jpg)

0 Comments:
Post a Comment
Subscribe to Post Comments [Atom]
<< Home